ಸುಳ್ಯ: ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ವೈಜ್ಞಾನಿಕ ಜೇನು ಕೃಷಿ ಕುರಿತು ತರಬೇತಿ ಕಾರ್ಯಕ್ರಮ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.
ಹರೀಶ್ ಉಬರಡ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರಿಗೆ ಜೇನು ಕೃಷಿಯ ಕುರಿತು ವೈಜ್ಞಾನಿಕ ಮಾಹಿತಿಯನ್ನು ಪಡೆದುಕೊಳ್ಳಲು ತಿಳಿಸಿದರು. ಡಾ. ಟಿ. ಜೆ. ರಮೇಶ ರವರು ವೈಜ್ಞಾನಿಕ ಜೇನು ಕೃಷಿಯ ಮಹತ್ವದ ಕುರಿತು ರೈತರಿಗೆ ಮಾಹಿತಿ ನೀಡಿದರು.
ಡಾ. ಕೇದಾರನಾಥ ಹಾಗೂ ಗಿರಿಧರ ದಾಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವೈಜ್ಞಾನಿಕ ಜೇನು ಕೃಷಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಸಂಯೋಜಕ ಡಾ. ಮಲ್ಲಿಕಾರ್ಜುನ ಎಲ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಬರಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್, ಗ್ರಾಪಂ ಸಿಬ್ಬಂದಿ ಸಂದೀಪ, ಹಾಗೂ 25 ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ 25 ಜನ ಆಯ್ದ ಪರಿಶಿಷ್ಟ ಜಾತಿ ಫಲಾನುಭವಿ ರೈತರಿಗೆ ಕೃಷಿ ಪರಿಕರಗಳಾದ ಜೇನು ಪೆಟ್ಟಿಗೆ, ಮರ ಹತ್ತುವ ಏಣಿ ಹಾಗೂ ತೆಂಗಿನ ಮರ ಹತ್ತುವ ಯಂತ್ರಗಳನ್ನು ವಿತರಿಸಲಾಯಿತು.