ಪುತ್ತೂರು: ಅಕ್ರಮವಾಗಿ ಮನೆಗೆ ಪ್ರವೇಶಿಸಿ ಹಿಂದೂ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಸಿದ್ದೀಕ್ ಎಂಬ ಅನ್ಯ ಕೋಮಿನ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಪೋಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆಸ್ಪತ್ರೆಗೆ ಭೇಟೀ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದ ಅವರು ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ವಿನಾಕಾರಣ ಶಾಂತಿ ಕದಡುವ ವ್ಯಕ್ತಿಗಳ ಮೇಲೆ ನಿಷ್ಪಕ್ಷಪಾತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.