ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಮಹಿಳಾ ಸಬಲೀಕರಣ ಘಟಕ, ಮಹಿಳಾ ದೌರ್ಜನ್ಯ ವಿರೋಧಿ ಘಟಕ ಯುತ್‌ ರೆಡ್‌ಕ್ರಾಸ್‌ ಸೊಸೈಟಿ, ಐಐಸಿ ಹಾಗೂ ಈಕ್ವಲ್‌ ಒಪರ್ಚುನಿಟಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಶುಕ್ರವಾರ ಆಚರಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೋ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಲ್ಲಿ ಅಸಾಧಾರಣ ಸಾಮರ್ಥ್ಯವಿದೆ. ಅದನ್ನು ಸದುಪಯೋಗ ಪಡಿಸಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು. ಈ ದಿನವು ಪ್ರತಿಯೋರ್ವ ಮಹಿಳೆಯೂ ತನ್ನ ಕುಟುಂಬಕ್ಕೆ, ಸಮುದಾಯಕ್ಕೆ ಹಾಗೂ ದೇಶಕ್ಕೆ ನೀಡಿರುವ ಕೊಡುಗೆಗಳನ್ನು ನೆನಪಿಸಿ ಅಭಿನಂದಿಸುವ ದಿನ. ಸ್ತ್ರೀತ್ವವನ್ನು ಸಂಭ್ರಮಿಸುವ ದಿನ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಇಂಪೀರಿಯಲ್‌ ಫರ್ನಿಚರ್‌ ಸಂಸ್ಥೆಯ ಸಂಸ್ಥಾಪಕ ವಯೊಲೆಟ್‌ ನತಾಲಿಯಾ ವ್ಯಾಪಾರದಲ್ಲಿ ಮಹಿಳಾ ನವೋದ್ಯಮಿಗಳು ಎಂಬ ವಿಷಯದ ಕುರಿತು ಮಾತನಾಡಿ, ಮಹಿಳೆಯರು ಹಿಂಜರಿಕೆ ಸ್ವಭಾವವನ್ನು ಬಿಟ್ಟು ತಮಗೆ ದೊರಕಿದ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕು. ಉದ್ಯಮ ಕ್ಷೇತ್ರದಲ್ಲಿ ಬಂದೊದಗುವ ಸವಾಲುಗಳನ್ನು ದಿಟ್ಟತನದಿಂದ ಎದುರಿಸುವ ಶಕ್ತಿ ಮಹಿಳೆಯರಿಗಿದೆ ಎಂದರು.





























 
 

ಕಾಲೇಜಿನ ಉಪಪ್ರಾಂಶುಪಾಲ ಡಾ| ವಿಜಯಕುಮಾರ್‌ ಎಂ. ಮಾತನಾಡಿ, “ಮಹಿಳೆ ಅಬಲೆಯಲ್ಲ ಬದಲಾಗಿ ಇಂದು ವಿದ್ಯಾವಂತಳಾಗಿ ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ಸನ್ನು ಗಳಿಸುತ್ತಿದ್ದಾಳೆ ಎಂದರು.

ವೇದಿಕೆಯಲ್ಲಿ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ಡಾ. ಡಿಂಪಲ್‌ ಜೆನ್ನಿಫರ್‌ ಫೆರ್ನಾಂಡಿಸ್, ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಘಟಕದ ಸಂಯೋಜಕ ನೊವೆಲಿನ್‌ ಡಿಜೋಜ, ಐಐಸಿ ಘಟಕದ ಸಂಯೋಜಕಿ ಗೀತಾ ಪೂರ್ಣಿಮಾ ಉಪಸ್ಥಿತರಿದ್ದರು.

ರಿಷಿತಾ ಮತ್ತು ಬಳಗ ಪ್ರಾರ್ಥಿಸಿದರು. ವಿದ್ಯಾರ್ಥಿ ಸಿಂಚನ್‌ ಸ್ವಾಗತಿಸಿದರು. ವಿದ್ಯಾರ್ಥಿನಿ ಸಹನಾ ಗೌಡ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಶಿಶಿಕಾ ವಂದಿಸಿದರು. ಕ್ಲಿಂಟನ್‌ ಸುವಾರಿಸ್‌ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top