ಮಾ.10 : ತಾಲೂಕು ಮಹಿಳಾ ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

ಪುತ್ತೂರು: ತಾಲೂಕು ಮಹಿಳಾ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಹಾಗೂ ತಾಲೂಕು ಬಂಟರ ಸಂಘದ ಸಹಯೋಗದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾ.10 ಭಾನುವಾರ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ.

ಮಧ್ಯಾಹ್ನ 2 ರಿಂದ ಆಟೋಟ ಸ್ಪರ್ಧೆಗಳು, 3.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 4 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿ ಸುಮಾ ಅಶೋಕ್ ರೈ ನೆರವೇರಿಸಲಿದ್ದು, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಸಂಚಾಲಕ ದಯಾನಂದ ಮನವಳಿಕೆ, ಮಹಿಳಾ ಸಂಘದ ಗೌರವಾಧ್ಯಕ್ಷೆ ಮಲ್ಲಿಕಾ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಮಲ್ಲಿಕಾ ಪ್ರಶಾಂತ್ ಪಕಳ, ಕೃಷ್ಣವೇಣಿ ಕೆ. ರೈ, ರಾಜೀವಿ ವಿ ಶೆಟ್ಟಿ ಕೆಡೆಂಜಿ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top