ಪುತ್ತೂರು: ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾಗರಣೆಯೂ ಜಾತ್ರೆ ಸಹಿತವಾಗಿ ಪೂರ್ವಶಿಷ್ಟ ಪದ್ಧತಿಯಂತೆ ಮಹಾರುದ್ರಯಾಗ, ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ನಡೆಯಿತು. ಬೆಳಗ್ಗಿನಿಂದ ದೇವಳದಲ್ಲಿ ಭಕ್ತ ಸಾಗರ ಹರಿದು ಬಂದಿತ್ತು. ಬಹುತೇಕ ಮಂದಿ ಭಕ್ತರು ದೇವಳದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಪ್ರದಕ್ಷಿಣೆ ಹಾಕಿದರು.

ದೇವಳದ ತುಳಸಿ ಕಟ್ಟೆ ಬಳಿ ಭಕ್ತರು ಶ್ರೀ ದೇವರಿಗೆ ಬಿಲ್ಚಾರ್ಚಣೆ ಸಂಕಲ್ಪ ಕೈಗೊಂಡರು. ಮಧ್ಯಾಹ್ನ ಹವನ ಅಭಿಷೇಕ ಪೂಜಾದಿಗಳು ಜರಗಿ ರಾತ್ರಿಯ ವೇಳೆಗೆ ಶ್ರೀ ದೇವರ ಉತ್ಸವದ ಬಲಿ ಹೊರಟು, ತಂತ್ರ ಸುತ್ತು ಜರಗಿ ಹೊರಾಂಗಣದಲ್ಲಿ ಚೆಂಡೆ ,ವಾದ್ಯ , ಸರ್ವವಾದ್ಯ ಸುತ್ತುಗಳ ನಂತರ ಕಟ್ಟೆಪೂಜೆ, ಪಲ್ಲಕಿ ಉತ್ಸವ, ಅಷ್ಟಾವಧಾನ ಸೇವೆ, ಚಂದ್ರಮಂಡಲ ರಥೋತ್ಸವ, ತೆಪ್ಪೋತ್ಸವದೊಂದಿಗೆ ಉತ್ಸವ ಮುಗಿದು , ತಡರಾತ್ರಿಯಲ್ಲಿ ಮಹಾಮಹಿಮಗೆ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಉತ್ಸವ ಬಲಿ ನಡೆಯಿತು.

ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್‌ನ ನೇತೃತ್ವದಲ್ಲಿ ದೇವಳದ ಸಹಯೋಗದೊಂದಿಗೆ ಬೆಳಿಗ್ಗೆ ದೇವಳ ಗದ್ದೆಯಲ್ಲಿರುವ ಶಿವನ ವಿಗ್ರಹದ ಬಳಿ ಒಂದು ಸುತ್ತು ಬಂದು ಬಳಿಕ ದೇವಳದ ಎದುರಿನ ಅಂಗಣದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು.