ಪುತ್ತೂರು: ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯಲಿದ್ದು ಸಂಪೂರ್ಣವಾಗಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಮಾಡಲಾಗುವುದು ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ರೂ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿಅವರು ಮಾತನಾಡಿದರು.
ಜನತೆಗೆ ಕಾಂಗ್ರೆಸ್ ಸರಕಾರ ಆಡಳಿತದಲ್ಲಿರಬೇಕು ಎಂಬ ಭಾವನೆ ಉಂಟಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಮಾಜಿ ಜಿಪಂಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ, ಉಪಾಧ್ಯಕ್ಷ ಪ್ರಮೋದ್ ಕೆ.ಎಸ್. ಉಪಸ್ಥಿತರಿದ್ದರು.
ವಲಯಾಧ್ಯಕ್ಷ ವೆಂಕಟ್ರಮಣ ಕೆ.ಎಸ್. ಸ್ವಾಗತಿಸಿ ವಂದಿಸಿದರು.