ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಸಂಸದರನ್ನು ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪ್ರಸ್ತುತ ಧಾರ್ಮಿಕ ದತ್ತಿಯ ಕೆಲವೊಂದು ಕಾನೂನುಗಳಿಂದ ದೇವಸ್ಥಾನಗಳಿಗೆ ಬರುವ ಅನುದಾನ ಕಡಿಮೆಯಾಗಿದೆ. ಆದರೂ ಗ್ರಾಮಸ್ಥರ ಕೈಜೋಡಿಸುವಿಕೆಯಿಂದ ಕೆಲಸ ಕಾರ್ಯಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನೂ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪ್ರಮುಖರಾದ ಬೂಡಿಯಾರ್ ರಾಧಾಕೃಷ್ಣ ರೈ, ಬಾಲಕೃಷ್ಣ ಬೋರ್ಕೃರ್, ಸುಧಾಕರ್ ರಾವ್ ಆರ್ಯಾಪು, ಡಾ. ಸುರೇಶ್ ಪುತ್ತೂರಾಯ, ಸಂಜೀವ ಪೂಜಾರಿ ಕೂರೇಲು, ಮಹಾಬಲ ರೈ ವಳತ್ತಡ್ಕ, ಜಿ.ಕೆ. ಭಟ್, ಸೀತಾರಾಮ ರೈ, ಜಯಂತ ಶೆಟ್ಟಿ ಕಂಬಳತ್ತಡ್ಡ, ಗಿರೀಶ್ ಕಿನ್ನಿಮಜಲು, ಬಾಲಕೃಷ್ಣ ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.