ಇಂದು ಅಂತಿಮಗೊಳ್ಳಲಿದೆ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ |  28 ರಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಗ್ಯಾರಂಟಿ : ಬಿ.ಎಸ್.ಯಡಿಯೂರಪ್ಪ

ದೆಹಲಿ: ಇಂದು ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಮಾಜಿ ಸಿಎಂ ಬಿ.ಎಸ್‍.ಯಡಿಯೂರಪ್ಪ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದೆಹಲಿಯಲ್ಲಿದ್ದು, ಈ ಕುರಿತು ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದ್ದಾರೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಈ ಬಾರಿ ಗೆಲುವು ಗ್ಯಾರಂಟಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು ಲೋಕಸಭಾ ಅಭ್ಯರ್ಥಿ ವಿಚಾರದ ಕುರಿತು ಯದುವೀರ್‍ ಅವರಲ್ಲಿ ಚರ್ಚೆ ಮಾಡಿರುವ ಕುರಿತು ಇಲ್ಲಿ ಚರ್ಚೆ ಮಾಡುವುದಿಲ್ಲ ಎಂದಿದ್ದಾರೆ. ಹಾಲಿ ಎಂಪಿಗಳಿಗೆ ಟಿಕೆಟ್ ಕೈತಪ್ಪುವ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ ಈ ಕುರಿತು ನಾನು ಏನೂ ಮಾತನಾಡುವುದಿಲ್ಲ. ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top