ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡಲು ಇಂದು ರಾತ್ರಿ ಕೇಂದ್ರ ಸರಕಾರದ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದ್ದು, ಖಾಸಗಿ ಸುದ್ದಿ ಸಂಸ್ಥೆಗಳು ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಮೂಲಗಳನ್ನು ಆಧರಿಸಿ ವರದಿ ಮಾಡಿದೆ.
ಈ ಕುರಿತು ಕೇಂದ್ರ ಸರಕಾರದ ಅಧಿಸೂಚನೆ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಮಾಹಿತಿಗಳೂ ಲಭ್ಯವಾಗಿದೆ.
ಸಿಎಎ ಜಾರಿ ಬಗ್ಗೆ ಪ್ರಧಾನಿ ಮೋದಿ ಅವರೇ ಅಧಿಕೃತ ಘೋಷಣೆ ಹೊರಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಲೋಕಸಭಾ ಚುನಾವಣೆ ಮುನ್ನವೇ ದೇಶಾದ್ಯಂತ ಸಿಎಎ ಜಾರಿ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು.