ಮಾ.13 : ಪುತ್ತೂರಿನಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ

ಪುತ್ತೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ಘಟಕದ ವತಿಯಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ ಮಾ.13 ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಆಡಳಿತದಲ್ಲಿನ ದುರಾಡಳಿತವನ್ನು ಸರಿಪಡಿಸಿ ಪಾರದರ್ಶಕ ಆಡಳಿತ ಒದಗಿಸುವ ನಿಟ್ಟಿನಲ್ಲಿ ಲೋಕಾಯುಕ್ತರು, ಪೊಲೀಸ್ ಮಹಾನಿರ್ದಶಕರು ಹಾಗೂ ನಿಬಂಧಕರು ಈಗಾಗಲೇ ಹೊರಡಿಸಿರುವ ಆದೇಶದಂತೆ ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ, ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ನಿಗದಿತ ಪತ್ರದಲ್ಲಿ ದೂರು ಅರ್ಜಿಗಳನ್ನು ನೀಡಬಹುದು.































 
 

ಬೆಳಿಗ್ಗೆ 11 ಗಂಟೆಗೆ ಸಭೆ ನಿಗದಿಪಡಿಸಲಾಗಿದ್ದು, ಸಂಬಂಧಪಟ್ಟವರು ಎಲ್ಲಾ ಸಿದ್ಧತೆಗಳನ್ನು  ಮಾಡಿಕೊಂಡು ಸಭೆಯಲ್ಲಿ ಹಾಜರಾಗುವಂತೆ ಕರ್ನಾಟಕ ಲೋಕಾಯುಕ್ತರ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top