ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಬಂಟ್ವಾಳ : ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಇಂದು ನಡೆದಿದೆ.

ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಯುವಕ.

ಇಂದು ಮುಂಜಾನೆ 4.30 ರ ಹೊತ್ತಿಗೆ ರಾತ್ರಿ ಪಾಳಿ ಮುಗಿಸಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‍ನಲ್ಲಿ ತೆರಳುತ್ತಿದ್ದಾಗ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.































 
 

ಮೆಲ್ಕಾರ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top