ಕಡಬ: ತಾಲೂಕಿನ ಏಣಿತ್ತಡ್ಕದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಏಣಿತ್ತಡ್ಕ ದಿ.ಈಶ್ವರ ನಾಯ್ಕರ ಪುತ್ರ ಉಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು.
ಸೋಮವಾರ ಮಧ್ಯಾಹ್ನ ಊಟ ಮಾಡಿ ಮನೆಯಿಂದ ಹೊರ ಹೋದವರು ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಅವರ ತಾಯಿ ತೋಟಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ಉಮೇಶ್ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.