ಶಿರಾಡಿ ಘಾಟ್‍ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ | ರಸ್ತೆ ಸಂಚಾರ ಬಂದ್ | ಬದಲಿ ರಸ್ತೆಯಲ್ಲಿ ಚಲಿಸುವಂತೆ ವಾಹನ ಸವಾರರಿಗೆ ಸೂಚನೆ

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿ ಶಿರಾಡಿ ಘಾಟ್ ಎನ್‍ಎಚ್‍ -75 ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಶಿರಾಡಿ ಘಾಟ್‍ ರಸ್ತೆಯ ಡಬಲ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ನೂರಾರು ವಾಹನಗಳು ನಿಂತಲ್ಲೇ ನಿಂತಿವೆ.

ಘಟನೆಯಿಂದಾಗಿ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಪೊಲೀಸರು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಮಂಗಳೂರಿನ ಎಂ.ಆರ್‍.ಪಿ.ಎಲ್‍ ನಿಂದ ತಜ್ಞರ ತಂಡ ಆಗಮಿಸಬೇಕಾಗಿದೆ.































 
 

ಮಂಗಳೂರು-ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು, ಮಂಗಳೂರಿನಿಂದ ಹಾಸನ, ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮೂಲಕ ತೆರಳಲು ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top