ಪುತ್ತೂರು: ಹಿರಿಯರು ರಕ್ತ ಮತ್ತು ಬೆವರನ್ನು ಒಂದು ಮಾಡಿ ಕಟ್ಟಿದ ಅಂತ್ಯಂತ ದೊಡ್ಡ ರಾಷ್ಟ್ರೀಯ ಪಕ್ಷ ಬಿಜೆಪಿ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಸಂಕಲ್ಪದಂತೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೆಲಸ ಕಾರ್ಯಗಳನ್ನು ಮಾಡಲಿದ್ದೇನೆ ಎಂದು ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಅವರು ಗುರುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಚ್ಯುತಿ ಬಾರದಂತೆ ಸಂಘಟನೆಯ ಆಧಾರದಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದೇನೆ.
ಒಬ್ಬ ಸಾಮಾನ್ಯ ಕಾರ್ಯಕರ್ತನಾದ ನನಗೆ ಇಂತಹ ದೊಡ್ಡ ಜವಾಬ್ದಾರಿ ನೀಡಿದ ಹಿನ್ನಲೆಯಲ್ಲಿ ದೇಶದ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನನ್ನ ನೆಚ್ಚಿನ ರಾಜಕೀಯ ಗುರು ಬಿ.ಎಸ್.ಯಡಿಯೂರಪ್ಪ ಸಹಿತ ಹಲವಾರು ರಾಷ್ಟ್ರೀಯ, ರಾಜ್ಯ, ಜಿಲ್ಲಾ ನಾಯಕರುಗಳಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
ಪುತ್ತೂರು ಆಗಮಿಸಿದ ಮೊದಲಿಗೆ ಪುತ್ತೂರಿನ ಆಡಳಿತ ಸೌಧದ ಬಳಿ ಇರುವ ಅಮರ ಜವಾನ್ ಸ್ಮಾರಕದ ಬಳಿ ತೆರಳಿ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಸೆಲ್ಯೂಟ್ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರು, ಮಾಜಿ ಸೈನಿಕರು ಉಪಸ್ಥಿತರಿದ್ದರು.