ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ವಿವಿಧ ಅಕಾಡೆಮಿಗಳಿಗೆ/ಪ್ರಾಧಿಕಾರಗಳಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಆದೇಶಿಸಲಾಗಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳಾಗಿ ಡಾ.ಪುರುಷೋತ್ತಮ (ನವದೆಹಲಿ), ಪ್ರೊ.ರಾಮಚಂದ್ರಪ್ಪ (ದಾವಣಗೆರೆ), ಡಾ.ವಿ.ಪಿ.ನಿರಂಜನಾರಾಧ್ಯ (ಬೆಂಗಳೂರು), ಟಿ.ಗುರುರಾಜ್ (ಮೈಸೂರು), ಡಾ.ರವಿಕುಮಾರ್ ನೀಹ (ತುಮಕೂರು), ದಾಕ್ಷಾಯಿಣಿ ಹುಡೇದ (ವಿಜಯಪುರ), ಯಾಕೂಬ್ ಖಾದರ್ (ಕುಂದಾಪುರ), ವಿರೂಪಣ್ಣ ಕಲ್ಲೂರು (ಕೊಪ್ಪಳ) ನೇಮಿಸಲಾಗಿದೆ.
ಉಳಿದಂತೆ ಕುವೆಂಪು ಭಾಷಾ ಬಾರತಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕರ್ನಾಟಕ ಲಲಿತಕಲಾ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬಯಲಾಟ ಅಕಾಡೆಮಿ, ಕರ್ನಾಟಕ ಬಂಜಾರ ಅಕಾಡೆಮಿ, ರಂಗ ಸಮಾಜ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿ ಆದೇಶಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ತಿಳಿಸಿದ್ದಾರೆ.