ಶಿವಮೊಗ್ಗ: ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದು, ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಅವರ ವಿರುದ್ಧ ನಿಲ್ಲುವುದಾಗಿ ಸವಾಲು ಹಾಕಿದ್ದಾರೆ.
ಕಾರ್ಯಕರ್ತರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಗೆದ್ದ ಎರಡು ತಿಂಗಳಿನಲ್ಲಿ ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರು ಅವರಿಗೆ ಬೇಕಾದವರಿಗೆ ಟಿಕೇಟ್ ನೀಡಿದ್ದಾರೆ. ಸೋತರೆ ಯಡಿಯೂರಪ್ಪನವರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಆರೋಗ್ಯ ಸರಿಯಿಲ್ಲ, ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದರು. ಆದರೆ ಕೆಲವರು ಬೊಮ್ಮಾಯಿ ಅವರನ್ನು ನಂಬಬೇಡಿ ಎಂದು ಹೇಳಿದರು. ಕೇಂದ್ರ ಸಮಿತಿಗೆ ಬೊಮ್ಮಾಯಿ, ಕಾಂತೇಶ್, ಶೆಟ್ಟರ್ ಹೆಸರು ಹೋಯಿತು. ಬೊಮ್ಮಾಯಿ ಅವರೇ ಬೇಡ ಅಂದ ಮೇಲೆ ಅವರ ಹೆಸರು ಹೇಗೆ ಹೋಯಿತು ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಹಿರಿಯ ನಾಯಕ ಎಂದು ಕೇಂದ್ರದ ನಾಯಕರು ಅವರ ಮಾತು ಕೇಳಿದರು ಎಂದು ಆಕ್ರೋಶ ಹೊರ ಹಾಕಿದರು.