ವಿಟ್ಲ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ಭಾನುವಾರ ನಡೆದಿದೆ.

ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಆಲ್ಟೋ ಕಾರು ಹಾಗೂ ಎಬ್ಬಿ ಬೈಕ್ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.