ಪುತ್ತೂರು: ದ.ಕ.ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ (ಮಾಸ್) ಅಧ್ಯಕ್ಷರಾಗಿ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮುಂದಿನ ನಾಲ್ಕು ವರ್ಷಗಳ ಕಾಲ ಅವರು ಕಾರ್ಯನಿರ್ವಹಿಸಲಿದ್ದಾರೆ.
ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ ಭಾಸ್ಕರ ಕೋಟ್ಯಾನ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಸಂಸ್ಥೆಯ ಎಲ್ಲಾ ನಿರ್ದೇಶಕರ ಉಪಸ್ಥಿತಿಯಲ್ಲಿ, ಚುನಾವಣಾಧಿಕಾರಿ ಮಂಗಳೂರು ಸಹಕಾರಿ ಇಲಾಖೆಯ ಸಹಾಯಕ ನಿಬಂಧಕ ವಿಲಾಸ್ ಉಪಸ್ಥಿತಿಯಲ್ಲಿ ಸವಣೂರು ಸೀತಾರಾಮ ರೈ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಹಾಲಿ ಸಮಿತಿಯಲ್ಲಿ ಉಪಾಧ್ಯಕ್ಷರಾಗಿದ್ದ ಸವಣೂರು ಸೀತಾರಾಮ ರೈ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪರವಾಗಿ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ನಿತ್ಯಾನಂದ ಮುಂಡೋಡಿ ಸೇರಿದಂತೆ ಹಲವಾರು ಮಂದಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
























