ಪುತ್ತೂರು: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.32 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಹೊರವಲಯದ ಬಡಗ ಎಡಪದವು ಎಂಬಲ್ಲಿ ನಡೆದಿದೆ.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಅಕ್ರಮ ಹಣ ವಹಿವಾಟಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದರೂ ಈ ನಡುವೆ ಮಂಗಳೂರು ಹೊರವಲಯದ ಬಡಗ ಎಡಪದವು ಚೆಕ್ ಪೋಸ್ಟ್ ನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದಾಗ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಭಾನುವಾರ ತಡರಾತ್ರಿ ಕೈಕಂಬ ನಿವಾಸಿಯೊಬ್ಬರು ಹುಂಡೈ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಲೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ವೇಳೆ ನಗದು ಪತ್ತೆಯಾಗಿದೆ. ಸೂಕ್ತ ದಾಖಲೆ ಸಲ್ಲಿಸಿದ ಬಳಿಕ ಹಣ ವಾಪಾಸು ನೀಡುವುದಾಗಿ ಅಧಿಕಾರಿಗಳು ಆ ವ್ಯಕ್ತಿಗೆ ತಿಳಿಸಿದ್ದಾರೆ.