ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‌ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮಾ.21 ರಿಂದ 24 ರ ತನಕ ಚೆನ್ನೈನ ಅಣ್ಣಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಿಎಂಆರ್‌ಐಟಿ ಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉನ್ನತ ಸಾಧನೆಯನ್ನು ಪ್ರದರ್ಶಿಸಿ ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top