ಬ್ಯಾಂಡ್, ಚೆಂಡೆಯೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ದಾಂಧಲೆ | ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಬಿಜೆಪಿಯಿಂದ ಮನವಿ

ಪುತ್ತೂರು : ಬಿಜೆಪಿ ಕಾರ್ಯಕರ್ತ ಜಯಾನಂದ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಪುತ್ತೂರು ಬಿಜೆಪಿ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಕ್ಷೇತ್ರದ ಶಾಸಕರು ಸುಮಾರು 1400 ಕೋಟಿ ರೂ. ಅನುದಾನವನ್ನು ತಂದು ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವ ಕುರಿತು ಜಯಾನಂದರು ಇದನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಈ ಹಿನ್ನಲೆಯಲ್ಲಿ ತಂಡವೊಂದು ಅವರ ಮನೆಗೆ ಚೆಂಡೆ, ಬ್ಯಾಂಡಿನೊoದಿಗೆ ತೆರಳಿ ಶಾಸಕರ ತಂಡ ಅನುದಾನ, ನಡೆದ ಕಾಮಗಾರಿಗಳ ಬ್ಯಾನರ್ ಪ್ರದರ್ಶಿಸಿ ಮಾಹಿತಿ ನೀಡಲಾರಂಭಿಸಿದ ವೇಳೆ ಚರ್ಚೆ, ಮಾತಿನ ಚಕಮಕಿ ನಡೆದಿತ್ತು.

ಈ ಘಟನೆ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಘಟನೆಯ ಕುರಿತು ಜಯಾನಂದ ರವರು ಪುತ್ತೂರು ನಗರ ಠಾಣೆಗೆ ಪ್ರಜ್ವಲ್ ರೈ, ಸನತ್ ರೈ ಮತ್ತು ಇನ್ನೂ 15 ಜನ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ನೀಡಿದರು. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.





























 
 

ಚುನಾವಣಾ ಸಂಧರ್ಭದಲ್ಲಿ ಪುತ್ತೂರಿನಲ್ಲಿ ಈ ರೀತಿಯ ಘಟನೆಗಳು ಜರಗುವುದು ತಾಲೂಕಿನ ಮತದಾರರಲ್ಲಿ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಭಯದ ವಾತಾವರಣವನ್ನು ಮೂಡಿಸಿದೆ. ಇಂತಹ ಘಟನೆಯಿಂದ ಜನರು ಭಯದಿಂದ ಈ ರೀತಿಯ ಘಟನೆಗಳು ಜೀವಿಸುವಂತಾಗಿದೆ. ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನು ಕೂಡಲೇ ಚುನಾವಣೆ ಮುಗಿಯುವ ತನಕ ಗಡಿಪಾರು ಮಾಡಲು ಆದೇಶಿಸಬೇಕು ಎಂದು ಮನವಿಯಲ್ಲಿ ಬಿಜೆಪಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ, ಗೋಪಾಲಕೃಷ್ಣ ಹೇರಳೆ, ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top