ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ವೈಭವದಿಂದ ನಡೆಯುತ್ತಿದೆ.
ಜಾತ್ರೋತ್ಸವದ ಅಂಗವಾಗಿ ಮಾ.21 ಗುರುವಾರ ಬೆಳಿಗ್ಗೆ 8.30 ಕ್ಕೆ ಬಲಿ ಹೊರಟು ಉತ್ಸವ, ಮಧ್ಯಾಹ್ನ 12 ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಮಹಾ ಅನ್ನಸಂತರ್ಪಣೆ ಜರಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಗೋಪಾಲ ಕೆ., ಭಕ್ತಾದಿಗಳು ಪಾಲ್ಗೊಂಡಿದ್ದರು.
ನಾಳೆ ದೇವಸ್ಥಾನದಲ್ಲಿ :
ಮಾ.22 ಶುಕ್ರವಾರ ಬೆಳಿಗ್ಗೆ ಬಲಿ ಹೊರಟು ಉತ್ಸವ, ಬಳಿಕ ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 9 ರಿಂದ ಶ್ರೀ ಮಹಾರಥೋತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ ನಡೆಯಲಿದೆ.