ಪುತ್ತೂರು: ಬಿಜೆಪಿ ಒಳಮೊಗ್ರು ಶಕ್ತಿಕೇಂದ್ರ ಲೋಕಸಭಾ ಚುನಾವಣೆ ಹಾಗೂ ಅಭ್ಯರ್ಥಿಯ ಮಹಾಶಕ್ತಿ ಕೇಂದ್ರ ಭೇಟಿಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಬೂತ್ ಸಮಿತಿ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲ ಅವರ ಮನೆಯಲ್ಲಿ ನಡೆಯಿತು.
ಸಭೆಯಲ್ಲಿ ಚುನಾವಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ಚುನಾವಣಾ ಬೂತ್ ಕಾರ್ಯ ಹಾಗೂ ಅಭ್ಯರ್ಥಿ ಭೇಟಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ , ರೇಖನಾಥ ರೈ, ಒಳಮೊಗ್ರು ಶಕ್ತಿಕೇಂದ್ರ ಪ್ರಮುಖ್ ರಾಜೇಶ್ ರೈ ಪರ್ಪುಂಜ , ಒಳಮೊಗ್ರು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತ್ರಿವೇಣಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಸೇರಿದಂತೆ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.