ಪುತ್ತೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ಶನಿವಾರ ಸಂಜೆ ನಡೆಸಲಾಯಿತು.
ಮತದಾರರ ಜಾಗೃತಿಗಾಘಿ ನಡೆದ ಪಥಸಂಚಲನ ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎನ್ನುವ ಘೋಷವಾಕ್ಯದೊಂದಿಗೆ ನಗರದಾದ್ಯಂತ ನಡೆಯಿತು.
ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರ ಸೇರಿದಂತೆ ತಾಲೂಕಿನ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.
ದರ್ಬೆ ವೃತದಿಂದ ಪ್ರಾರಂಭವಾದ ಪಥಸಂಚಲನವು ನಗರದ ವಿವಿಧ ಕಡೆ ಸಂಚರಿಸಿ, ಲೋಕಸಭಾ ಚುನಾವಣೆ ಅಂಗವಾಗಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವ ಕುರಿತು ಜಾಗೃತಿ ಮೂಡಿಸಲಾಯಿತು.