ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಈ  ಮೂಲಕ ಲೋಕಸಭೆ ಚುನಾವಣೆ ಮೊದಲು ಬಿಜೆಪಿಗೆ ಬರುವ ಮೂಲಕ ಬಲ ತುಂಬಿದ್ದಾರೆ.

ಸೋಮವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು.

ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್‌, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಅವರು ಭಾಗಿಯಾಗಿದ್ದಾರೆ. ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು. ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ. ಅವರು ನಾಯಕರು ಮತ್ತು ಹಿಂಬಾಲಕರನ್ನು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಪಕ್ಷಕ್ಕೆ ಸ್ವಾಗತ ಮಾಡಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top