ಬೆಂಗಳೂರು: ಕರ್ನಾಟಕ ರಾಜ್ಯಾದಂತ ಮತದಾನ ನಡೆಯುವ ದಿನವಾದ ಏ.26 ಹಾಗೂ ಮೇ 7 ರಂದು ಮತದಾನ ಮಾಡಲು ನೌಕರರಿಗೆ ಅನುಕೂಲವಾಗುವಂತೆ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ವೇತನ ಸಹಿತ ನೀಡಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳು ಹಾಗೂ ಏ.26 ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮತದಾನದ ದಿನ ಕಾರ್ಮಿಕರಿಗೆ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸುವ ನಿಟ್ಟಿನಲ್ಲಿ ಎಲ್ಲಾ ಸಂಸ್ಥೆಗಳು, ನಿಯೋಜಕರು ಅನುಕೂಲ ಮಾಡಿ ರಜೆ ನೀಡಬೇಕು ಎಂದು ಆಯೋಗ ನಿರ್ದೇಶನ ನೀಡಿದೆ.
ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧ ಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ಆಯೋಗ ನೀಡಿದೆ.