ಕಡಬ
: ತಾಲೂಕು ಪಂಚಾಯಿತಿ ಗೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆಗೆ ಒಳಡಿಸಿದ್ದಾರೆ.
ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಬಿ.ವಿ.ಜಯಣ್ಣ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಬುಧವಾರ ಬೆಳ್ಳಂಬೆಳಗ್ಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಯಣ್ಣ ಅವರು ವಾಸ್ತವ್ಯ ಇದ್ದ ಕಡಬ ಪಂಜ ರಸ್ತೆಯಲ್ಲಿರುವ ಬಾಡಿಗೆ ಮನೆಗೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಕಡಬ ತಾಲೂಕು ಪಂಚಾಯಿತಿಗೆ ಕರೆತಂದು ತನಿಖೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ.
ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.