ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಏ.2 ಮಂಗಳವಾರ ಬೈಪಾಸ್ ರಸ್ತೆಯ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಸಂಸದ ನಳೀನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆ ತಿಳಿಸಿದೆ.

























