ಕಡಬ : ಅಕ್ರಮವಾಗಿ ಗೋವಧೆ ಮಾಡಿ ಮಾಂಸ ಮಾಡುತ್ತಿದ್ದ ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಕೊಯಿಲಾ ಕೆಮ್ಮಾರ ಆಕೀರ ಎಂಬಲ್ಲಿ ನಡೆದಿದೆ.
ಕಡಬ ತಾಲೂಕು ಕೊಯಿಲಾ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ, ಇಲ್ಯಾಸ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಕುರಿತು ಮಾಹಿತಿ ತಿಳಿಸಿದ ಕಡಬ ಪೊಲೀಸ್ ಠಾಣಾ ಪಿ.ಎಸ್.ಐ ಅಭಿನಂಧನ್ ಎಂ.ಎಸ್ ಹಾಗೂ ಸಿಬ್ಬಂದಿಗಳು ಮಾ.28 ರಂದು ಬೆಳಿಗ್ಗೆ ದಾಳಿ ಮಾಡಿದ್ದು, ಕೊಯಿಲ ಗ್ರಾಮದ ಇಲ್ಯಾಸ್ ಮತ್ತು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಮಹಮ್ಮದ್ ಆಮು ಎಂಬವರುಗಳು ಅಕ್ರಮವಾಗಿ ಜಾನುವಾರುಗಳ ವಧೆ ಮಾಡುತ್ತಿರುವುದು ಕಂಡುಬಂದಿರುತ್ತದೆ.
ಸ್ಥಳದಲ್ಲಿದ್ದ ಜಾನುವಾರುಗಳ ಮಾಂಸ, ತ್ಯಾಜ್ಯ ಹಾಗೂ ಜಾನುವಾರು ವಧೆಗೆ ಬಳಸಿದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಿಂದ ಪರಾರಿಯಾಗಿರುವ ಇಲ್ಯಾಸ್ ಹಾಗೂ ಮಹಮ್ಮದ್ ಆಮು ಎಂಬವರ ವಿರುದ್ಧ, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.