ಪುತ್ತೂರು: ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು.

ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ ಜಿ.ಕೆ ಭಟ್, ಪಕ್ಷದ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನೀಲ್ ಆಳ್ವಾ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಚುನಾವಣಾ ನಿರ್ವಹಣಾ ಸಹ ಸಂಚಾಲಕ ಉಮೇಶ್ ಗೌಡ, ಪ್ರಸನ್ನ ಮಾರ್ತ, ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ, ನಿತೀಶ್ ಕುಮಾರ್ ಶಾಂತಿವನ, ಜೀವಂಧರ್ ಜೈನ್, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಸಹಜ್ ರೈ ಬಳಜ್ಜ, ರಾಜೇಶ್ ಬನ್ನೂರು, ಲೋಕೇಶ್ ಹೆಗ್ಡೆ, ಅನಿಲ್ ತೆಂಕಿಲ ಮೊದಲಾದವರು ಉಪಸ್ಥಿತರಿದ್ದರು.