ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ ಮನೆ ಸಂಪರ್ಕ ಅಭಿಯಾನಕ್ಕೆ ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಭಾನುವಾರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಎ.2 ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಕುರಿತು ಮಾಹಿತಿ ನೀಡಲಾಯಿತು.

ಅಭಿಯಾನದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮಂಗಳೂರು ವಿಭಾಗದ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ ಪೆರಿಯತ್ತೋಡಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂದರ್ ಜೈನ್, ಬೂತ್ ಅಧ್ಯಕ್ಷ ನಿತೇಶ್ ಹಾಗೂ ವಾರ್ಡ್ ಪ್ರಮುಖರು, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.