ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಭೇಟಿ ಮಾಡಿದರು.

ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪ್ರದೀಪ್ ಕುಮಾರ್ ಕಲ್ಕೂರ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.