ಸವಣೂರು: ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಭಾನುವಾರ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಕಣ್ಕಲ್ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಿರಂಜನ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ.ರಘುನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಗ್ರಾಮದಲ್ಲಿ ಬರುವ ಏಳು ಶಾಲೆಗಳ ಪೈಕಿ ಆರು ಶಾಲೆಗಳಲ್ಲಿ ಮಾತ್ರ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ನಡೆದಿತ್ತು. ಆದರೆ 25 ವರ್ಷಗಳ ನಂತರ ನೇಲ್ಯಡ್ಕ ಶಾಲೆಯಲ್ಲಿ ಇದೇ ಮೊದಲ ಬಾರಿಗೆ ಎನ್.ಎಸ್.ಎಸ್. ಶಿಬಿರ ನಡೆಯುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಡಾ.ದೇವಿ ಪ್ರಸಾದ್ ಕಾನತ್ತೂರ್, ವಿನೋದ್ ಬೊಳ್ಮಲೆ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕ ಪುರುಷೋತ್ತಮ ಬಿ., ಸುರೇಶ್ ಎನ್. ಹಾಗೂ ಸುಮಾ ಎಸ್. ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸಹ ಶಿಬಿರಾಧಿಕಾರಿಗಳು, ಶಿಬಿರಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.