ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆಮುಹೂರ್ತ ಸೋಮವಾರ ನಡೆಯಿತು.

ಏ.10 ರಿಂದ 17 ರ ತನಕ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ಸಲ್ಲಿಸಿದ ಬಳಿ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಿ.ಎಸ್. ಭಟ್ ಗೊನೆ ಮುಹೂರ್ತ ನೆರವೇರಿಸಿದರು. ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯವರು, ಭಕ್ತರು, ಕರಸೇವಕರು ಉಪಸ್ಥಿತರಿದ್ದರು.