ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆಯೋಜಕರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.
ಮಂಗಳೂರಿನ ಮುಡಿಪು ನಲ್ಲಿ ಒಂದು ಬದಿಯ ರಸ್ತೆಯನ್ನು ತಡೆಮಾಡಿ ಚಯರ್ ಗಳನ್ನು ಅಳವಡಿಸಿ ಇಫ್ತಾರ್ ಕೂಟ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಹಿಜಾಂವೇ ಆಯೋಜಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಅದರಂತೆ ಇದೀಗ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.