ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ಧ : ಸಂಸದ ನಳಿನ್ ಕುಮಾರ್ ಕಟೀಲ್‍ | ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದ್ದು, ಭಾರತೀಯ ಜನತಾ ಪಾರ್ಟಿಯ ಕನಸುಗಳು ನನಸಾಗುವ ಕಾಲಘಟ್ಟದಲ್ಲಿದ್ದು, ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಶತಸಿದ್ಧ ಎಂದು ಹೇಳಿದ ಅವರು, ಕಳೆದ ಬಾರಿ 2.70 ಲಕ್ಷ ಮತಗಳಿಂದ ಸಂಸದನಾಗಿ ನಾನು ಆಯ್ಕೆಯಾಗಿದ್ದು, ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಜತೆಗೆ ಪುತ್ತೂರಿನಲ್ಲಿ 70 ಸಾವಿರ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಡುವ ಪ್ರಯತ್ನವನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.































 
 

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ಗೋಹತ್ಯೆ, ಲವ್‍ ಜಿಹಾದಿಗಳಗೆ ಬೆಂಬಲ ನೀಡಿ ಹಿಂದುತ್ವ ಎಂದು ಹೇಳುವುದು ಅಲ್ಲ. ಹಿಂದುತ್ವ ಎಂಬುದು ಹೃದಯದಿಂದ ಬರಬೇಕು. ಅದು ಬಿಜೆಪಿ ಕಾರ್ಯಕರ್ತರಲ್ಲಿದೆ. ಪುತ್ತೂರಿನಲ್ಲಿ ಚೆಂಡೆಯೊಂದಿಗೆ ಮನೆ ಮನೆಗಳಲ್ಲಿ ಮತ ಯಾಚನೆ ಕಾರ್ಯ ಮಾಡಬೇಕು ಎಂದರು.

ಮೈಸೂರು ಸಂಸದ ಪ್ರತಾಪಸಿಂಹ ಮಾತನಾಡಿ, ವಾಜಪೇಯಿ ಸಂದರ್ಭದಲ್ಲಿ ಮಾಡಿದ ತಪ್ಪುಗಳು ಯಾವುದೇ ಕಾರಣಕ್ಕೂ ಆಗಬಾರದು. ಜಾಗತೀಕವಾಗಿ ರಾಜಕೀಯದ ನಿರ್ಧಾರ ಮಾಡುವವರು ನರೇಂದ್ರ ಮೋದಿಯವರನ್ನು ಈ ಬಾರಿ ಗೆಲ್ಲಿಸಲು ಪಣತೊಡಬೇಕಾಗಿದೆ ಎಂದರು.

ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‍ ಚೌಟ ಮಾತನಾಡಿ, ಪಾರ್ಟಿಯ ಕಾರ್ಯಕರ್ತನಾಗಿ ನನಗೆ ನೀಡಿದ ಜವಾಬ್ದಾರಿ. ಈ ನಿಟ್ಟಿನಲ್ಲಿ ಕಾರ್ಯಕರ್ತರ ಪ್ರೀತಿ-ವಿಶ್ವಾಸಕ್ಕೆ ಯಾವುದೇ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ನರೇಂದ್ರ ಮೋದಿಯವರ ವಿಕಸಿತ ಭಾರತದ ಕಲ್ಪನೆ ಇದೆಯೋ ಅದಕ್ಕೆ ಪೂರಕವಾಗಿ ಕೆಲಕ ಕಾರ್ಯಗಳನ್ನು ಮಾಡುತ್ತೇನೆ ಎಂದ ಅವರು, ದಕ್ಷಿಣ ಕನ್ನಡ ಜಿಲ್ಲೆ ತುಳುನಾಡ ದೈವ-ದೇವರುಗಳ ಜಿಲ್ಲೆ. ಈ ಜಿಲ್ಲೆಯ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡವನು ನಾನು. ಈ ನಿಟ್ಟಿನಲ್ಲಿ ನಗೆ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ‍ಆರ್ವರ್, ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಬೊಟ್ಯಾಡಿ, ಪ್ರೇಮಾನಂದ ಶೆಟ್ಟಿ, ಪುತ್ತೂರು ಚುನಾವಣಾ ಉಸ್ತುವಾರಿ ಸುಲೋಚನಾ, ಚುನಾವಣಾ ನಿರ್ವಹಣ ಸಮಿತಿ ಸಂಚಾಲಕ ನಿತಿನ್ ಕುಮಾರ್, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಚುನಾವಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಉಪಾಧ್ಯಕ್ಷ ಸುನೀಲ್‍ ಆಳ್ವ, ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್‍.ಸಿ.ನಾರಾಯಣ, ಎಸ್‍ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ, ಜಿಲ್ಲಾ ಸಹಪ್ರಭಾರಿ ರಾಜೇಶ್‍ ಕಾವೇರಿ, ವಿಧಾನಸಭಾ ಸದಸ್ಯ ಪ್ರತಾಪಸಿಂಹ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು. ಉಷಾ ಮುಳಿಯ ವಂದೇ ಮಾತರಂ ಹಾಡಿದರು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top