ಮಂಗಳೂರು: ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ಬಳಿಕ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.