ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಸಾಧ್ಯತೆ !

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ ಇದ್ದು, ಈ ಕುರಿತು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.1 ರಿಂದ 22 ರ ತನಕ ರಾಜ್ಯದ 1120 ಕ್ಕೂ ಅಧಿಕ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಮಾ.25 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿದೆ. ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಹಂತಕ್ಕೆ ತಲುಪಿದೆ. ಒಂದು ವಾರದೊಳಗೆ ಪೂರ್ಣಗೊಂಡು ಅಂಕಗಳನ್ನು ಕಂಪ್ಯೂಟರೀಕರಣಗೊಳಿಸುವ ಕಾರ್ಯ ಪೂರ್ಣಗೊಳ್ಳಲಿದೆ.

ಈ ಹಿನ್ನಲೆಯಲ್ಲಿ ಏಪ್ರಿಲ್ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಚಿಂತನೆ ನಡೆಸಲಾಗಿದೆ ಎಂದು ಗೊತ್ತಾಗಿದೆ. ಈ ನಡುವೆ 5,8 ಹಾಗೂ 9ನೇ ತರಗತಿ ಮಕ್ಕಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ನಡೆಯುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top