ವಿಟ್ಲ: ಅಡ್ಯನಡ್ಕದಲ್ಲಿ ಇತ್ತೀಚೆಗೆ ನಡೆದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ದೂರು ದಾಖಲಾಗಿದೆ.
ಅಡ್ಯನಡ್ಕ ನಿವಾಸಿ ಮಹಮ್ಮದಾಲಿ ಎ. (36) ಎಂಬವರು ನೀಡಿದ ದೂರಿನಂತೆ ಗಣೇಶ್ ಎಂಬವರು ಮನೆಯ ಬಳಿ ಬಂದು ಹಣದ ವಿಚಾರದಲ್ಲಿ ತಕರಾರು ತೆಗೆದು ಅವ್ಯಾಚವಾಗಿ ನಿಂದಿಸಿ, ಕತ್ತಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದು, ಸ್ಥಳೀಯರು ಬಂದಾಗ ಪರಾರಿಯಾಗಿರುತ್ತಾನೆ ಎಂದು ಪ್ರಕರಣ ದಾಖಲಾಗಿದೆ.
ಈ ನಡುವೆ ಗಣೇಶ್ ಅವರು ಮಹಮ್ಮದಾಲಿ ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆಂದು ಪ್ರತಿದೂರು ನೀಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸರು ಇತ್ತಂಡಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.