ಪುತ್ತೂರು: ಜಿಲ್ಲಾ ಬಜರಂಗದಳ ಸಂಚಾಲಕ ಭರತ್ ಕುಮ್ಡೇಲು ಅವರನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿರುವುದನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೂ ಕಾರ್ಯಕರ್ತರನ್ನು ಗುರಿಮಾಡಿ ಗಡಿಪಾರು ಮಾಡುತ್ತಿದೆ.
ಗಡಿಪಾರು ಆದೇಶದ ಕುರಿತು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
























