ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು.

ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಕಿರಣ್ ಬುಡ್ಲೆಗುತ್ತು, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.