ಸ್ವರ್ಣ ಸಾಧನಾ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಮಾಡುವ ‘ಸ್ವರ್ಣ ಸಾಧನಾ ಪ್ರಶಸ್ತಿ’ಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿಯವರು ಆಯ್ಕೆಯಾಗಿದ್ದಾರೆ.

ಸಂಘದ ವತಿಯಿಂದ 2022ರಲ್ಲಿ ಪ್ರಾರಂಭಗೊಂಡ ವಿವಿಧ ಕ್ಷೇತ್ರದ ಸಾಧಕರಿಗೆ ನೀಡುತ್ತಿರುವ ಪ್ರಶಸ್ತಿಗೆ ಈ ವರ್ಷ ಖ್ಯಾತ ಸಾಹಿತಿ, ಕವಿ ಸುಬ್ರಾಯ ಚೊಕ್ಕಾಡಿಯವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ 4 ರಂದು ಪುತ್ತೂರಿನ ‘ಜೈನ ಭವನ’ದಲ್ಲಿ ಜರಗಲಿದ್ದು, ಪ್ರಶಸ್ತಿ 15,000 ರೂಪಾಯಿ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆಯೆಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top