ವಿಟ್ಲ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ.
ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಸುಶೀಲಾ ಅವರ ಪತಿ ಮೂರು ತಿಂಗಳ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದಾದ ಬಳಿಕ ಸುಶೀಲಾ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದು, ತನ್ನ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























