ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ

ಪುತ್ತೂರು : ದಕ್ಷಿಣ ಕನ್ನಡದ ಪ್ರತಿಷ್ಟಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಜವಾಹರ್ ನವೋದಯ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದ ಸುಳ್ಯ ವಲಯ ಅರಣ್ಯಾಧಿಕಾರಿ ಎನ್ ಮಂಜುನಾಥ್ ರವರ ಪುತ್ರ ತನ್ಮಯ್ ಪಿ.ಎಂ. ಅವರು ಅತ್ಯುನ್ನತ ಶ್ರೇಣಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ.

ತನ್ಮಯ್ ಕಳೆದ ವಾರವಾಷ್ಟೇ ಪ್ರಕಟವಾಗಿದ್ದ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲೇ ತರಬೇತಿ ಪಡೆದು ಉತ್ತೀರ್ಣರಾಗಿದ್ದು ಗಮನಾರ್ಹ ಅಂಶವಾಗಿದೆ. ಅತೀ ಕಡಿಮೆ ಅವಧಿಯಲ್ಲಿ ಅತ್ಯುನ್ನತ ಸಾಧನೆ ಮಾಡಿ ವಿದ್ಯಾಮಾತಾ ಅಕಾಡೆಮಿಯ ತರಬೇತಿಗೆ ಹಿಡಿದ ಕೈಗನ್ನಡಿಯಾಗಿದ್ದು ಇನ್ನೂ ಹಲವಾರು ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಲು ಸ್ಫೂರ್ತಿಯಾಗಿದೆ ಎಂದು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯಶ್ ರೈ ಯವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಇನ್ನೂ ಮೂವರು ವಿದ್ಯಾರ್ಥಿಗಳಾದ ವಿಸ್ಮಯ್ ಬಿ.ವಿ,ನಿಖಿಲ್ ಎಂ.ಎಸ್ ಹಾಗೂ ಯುತಿಕಾ ಸಿ, ಅವರುಗಳು ಕೂಡ ಉತ್ತೀರ್ಣರಾಗಿದ್ದು, ಮಕ್ಕಳ ಅದ್ಭುತ ಸಾಧನೆಗೆ ವಿದ್ಯಾಮಾತಾ ಅಕಾಡೆಮಿ ಇದರ ಆಡಳಿತ ಮಂಡಳಿ  ಸಿಬಂದಿವರ್ಗ ಮಕ್ಕಳನ್ನು ಅಭಿನಂದಿಸಿದೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top