ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಲತಾ ಅವರ ಜತೆಗೆ ಹಲವಾರು ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಟಿ ರವಿ, ರಾಕ್ ಲೈನ್ ವೆಂಕಟೇಶ್, ಮಂಡ್ಯದ ಹಲವು ಮುಖಂಡರು ಉಪಸ್ಥಿತರಿದ್ದರು.
ಕಳೆದ ಬಾರಿ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
























