ಲೋಕಸಭಾ ಸಾರ್ವತ್ರಿಕ ಚುನಾವಣೆ | ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಜಾಗೃತಿ ಕಾರ್ಯಕ್ರಮ

ಪುತ್ತೂರು: ಹಿರಿಯ ನಾಗರಿಕರಿಗೆ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತಚಲಾಯಿಸುವ ವ್ಯವಸ್ಥೆಯನ್ನು ಈ ಬಾರಿಯೂ ಚುನಾವಣಾ ಆಯೋಗ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಶೇ.40 ಕ್ಕಿಂತ ಹೆಚ್ಚಿನ ಅಂಗವೈಕಲ್ಯವಿರುವ ವಿಶೇಷ ಚೇತನರ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು ಮನೆಯಿಂದಲೇ ಮತಚಲಾಯಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಪುತ್ತೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಹೇಳಿದರು.

ಅವರು ಶುಕ್ರವಾರ ಪುತ್ತೂರು ತಾ.ಪಂ. ಸಭಾಂಗಣದಲ್ಲಿ ದ.ಕ.ಜಿಲ್ಲಾ ಸ್ವೀಪ್‌ ಸಮಿತಿ, ತಾಲೂಕು ಸ್ವೀಪ್  ಸಮಿತಿ , ಪುತ್ತೂರು ತಾಲೂಕು ಪಂಚಾಯಿತಿ ಹಾಗೂ ವಿಕಲಚೇತನರ ಸೇವಾ ಕೇಂದ್ರದ ಸಹಯೋಗದಲ್ಲಿ ವಿಕಲಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ  ಪುನರ್ವಸತಿ ಕಾರ್ಯಕರ್ತರು , ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ , ವಿಕಲಚೇತನರಿಗೆ ಹಾಗೂ ಹಿರಿಯನಾಗರಿಕರಿಗೆ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

 ನಿಮ್ಮ ಕಾರ್ಯವ್ಯಾಪ್ತಿಯಲ್ಲಿನ ಎಲ್ಲಾ ವಿಶೇಷ ಚೇತನರು ಮತದಾನದಲ್ಲಿ ಪಾಲ್ಗೊಳ್ಳಬೇಕು. ಅವಶ್ಯಕ ಎಲ್ಲಾ ಸೌಕರ್ಯಗಳನ್ನು ಚುನಾವಣಾ ಪೂರ್ವವಾಗಿ ಈಗಾಗಲೇ ಮತಗಟ್ಟೆಗಳಲ್ಲಿ ವಿಶೇಷಚೇತನರಿಗೆ ಅನುಕೂಲವಾಗಲು ರಾಂಪ್‌ ಇನ್ನಿತರ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.



































 
 

ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯಾ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಬನ್ನಿ ಮತದಾನ ಕೇಂದ್ರಕ್ಕೆ ಕರ ಪತ್ರವನ್ನು ವಿತರಿಸಲಾಯಿತು. 

ಈ ಸಂದರ್ಭ ವಿಕಲಚೇತನರ ತಾಲೂಕು ನೋಡಲ್ ಅಧಿಕಾರಿ ವಾಣಿಶ್ರೀ, ಪುತ್ತೂರು ತಾಲೂಕು ಪಂಚಾಯಿತಿ ಸ್ವೀಪ್‌ ಸಂಯೋಜಕಿ ತುಳಸಿ, ಪುತ್ತೂರು ತಾಲೂಕು ವಿವಿಧೋದ್ದೇಶ  ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top