ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೊತ್ಸವದ ಅಂಗವಾಗಿ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯನ್ನು ದೇವಸ್ಥಾನದ ಎದುರಿನ ಗದ್ದೆಯಲ್ಲಿ ತೆರೆಯಲಾಗಿದೆ.
ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ದೀಪ ಬೆಳಗಿಸುವ ಮೂಲಕ ಕಚೇರಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಸುದೇಶ್ ಶೆಟ್ಟಿ ಶಾಂತಿನಗರ, ಪಂಜಿಗುಡ್ಡೆ ಈಶ್ವರ ಭಟ್, ದಿನೇಶ್ ಪಿ ವಿ, ಸುಭಾಸ್ ರೈ ಬೆಳ್ಳಿಪ್ಪಾಡಿ, ಉಮೇಶ್ ಆಚಾರ್ಯ ಕರ್ಮಲ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ನಯನಾ ರೈ ನೆಲ್ಲಿಕಟ್ಟೆ, ನಳಿನಿ ಪಿ ಶೆಟ್ಟಿ ಡ್ಯಾಶ್ ಮಾರ್ಕೆಟಿಂಗ್, ನವೀನ್ ನ್ಯಾಕ್ ಬೆದ್ರಳ, ಅರವಿಂದ್ ಪೆರಿಗೇರಿ ಉಪಸ್ಥಿತರಿದ್ದರು.
ಬೆಳಿಗ್ಗೆಯಿಂದ ಸಂಜೆ ತನಕ ಕಚೇರಿ ಕಾರ್ಯನಿರ್ವಹಿಸಲಿದ್ದು, ಹಸಿರು ಕಾಣಿಕೆ ತಂದೊಪ್ಪಿಸಿದಲ್ಲಿ ರಶೀದಿ ನೀಡಲಾಗುವುದು ಎಂದು ವ್ಯವಸ್ಥಾಕರು ತಿಳಿಸಿದ್ದಾರೆ.