ಕಡಬ: ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರ ಹೆಜ್ಜೆ ಮತ್ತೆ ಕಾಣಿಸಿಕೊಂಡಿದೆ. ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆ ಮತ್ತೆ ನಕ್ಸಲರು ಪ್ರತ್ಯಕ್ಷವಾಗಿದ್ದಾರೆ.
ಶುಕ್ರವಾರ ರಾತ್ರಿ ವೇಳೆ ಬಿಳಿನೆಲೆ ಚೇರು ಎಂಬಲ್ಲಿ ನಕ್ಸಲರ ತಂಡ ಕಾಣಿಸಿಕೊಂಡಿದೆ. ಚೇರು ಗ್ರಾಮದ ಮನೆಯೊಂದಕ್ಕೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಭೇಟಿ ನೀಡಿದೆ. ಮನೆಗೆ ಬಂದು ಊಟ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಅಷ್ಟು ಮಾತ್ರವಲ್ಲದೆ, ನಕ್ಸಲರು ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಮೋಸ್ಟ್ ವಾಂಡೆಟ್ ನಕ್ಸಲ್ ವಿಕ್ರಮ ಗೌಡ, ಮುಂಡಗಾರು ಲತಾ ತಂಡ ಪ್ರತ್ಯಕ್ಷವಾದ ಶಂಕೆ ವ್ಯಕ್ತವಾಗಿದೆ.