ಮುಂಬೈ: ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ಚಿನ್ನದ ಬೆಲೆ 10 ಗ್ರಾಂ ಗೆ 1500 ರೂಪಾಯಿ ಏರಿಕೆಯಾಗಿದೆ. ಮೊದಲ ಬಾರಿಗೆ 10 ಗ್ರಾಂ ಚಿನ್ನದ ಬೆಲೆ 70 ಸಾವಿರದ ಗಡಿ ದಾಟಿ 71100 ರೂಪಾಯಿ ತಲುಪಿದೆ.
ಭೌಗೋಳಿಕ ಹಾಗೂ ರಾಜಕೀಯ ಅಪಾಯ ಸಾಧ್ಯತೆಗಳು ಮತ್ತು ಕೇಂದ್ರೀಯ ಬ್ಯಾಂಕ್ ಗಳಿಂದ ಖರೀದಿ ಭರಾಟೆಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಆಕಾಶದತ್ತರಕ್ಕೆ ಏರಿಕೆ ಆಗಿದೆ. ಬೆಳ್ಳಿ ಕೂಡಾ ಇದರಲ್ಲಿ ಪಾಲು ಪಡೆದಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ಬೆಳ್ಳಿಯ ಬೆಲೆ 2000 ರೂಪಾಯಿ ಹೆಚ್ಚಳಗೊಂಡಿದ್ದು, ಕೆ.ಜಿ. ಬೆಳ್ಳಿ ಬೆಲೆ 80 ಸಾವಿರದ ಗಡಿ ದಾಟಿ 81200 ರೂಪಾಯಿ ತಲುಪಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಭಾರಿ ಆಭರಣ ಮಳಿಗೆಗಳ ವ್ಯವಹಾರಕ್ಕೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ವ್ಯಾಪಾರ ಶೇ. 50 ರಷ್ಟು ಕುಸಿದಿದೆ ಎಂದು ಆಭರಣ ವ್ಯಾಪಾರಿಗಳು ಹೇಳಿದ್ದಾರೆ.