ಎಳನೀರು ಕುಡಿದು 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಮಂಗಳೂರು: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಬಳಿ ಎಳನೀರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಅಡ್ಯಾ‌ರ್ ನಲ್ಲಿರುವ ಲ್ಯಾಂಡ್ಸ್ ಫ್ಲವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಏ.8 ರಂದು ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿದ್ದಾರೆ. ಎಳನೀರು ಕುಡಿದ ಬಳಿಕ ಮರುದಿನ ಬೆಳಗ್ಗೆಯಿಂದ ಸಂಜೆಯ ತನಕ ಅಡ್ಯಾರ್ ಕಣ್ಣೂರು, ತುಂಬೆ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ.

ಸದ್ಯ ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಈ ಕುರಿತು ಮಾಹಿತಿ ತಿಳಿದು ಅಡ್ಯಾ‌ರ್ ನಲ್ಲಿರುವ ಬೊಂಡ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಡೀ ಫ್ಯಾಕ್ಟರಿಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡಿ ಶುಚಿಗೊಳಿಸಲಾಗಿದೆ



































 
 

ಎಳನೀರಿನ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಜನ ಆತಂಕಕ್ಕೆ ಒಳಗಾಗದಂತೆ ಆರೋಗ್ಯಾಧಿಕಾರಿಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top